

ಮಧ್ಯಪ್ರದೇಶದ ಉಜ್ಜಯನಿಯಲ್ಲಿ ನಾಲ್ಕು ವರ್ಷದ ಬಾಲಕಿ ಮೇಲೆ ಅಪ್ರಾಪ್ತ ಅತ್ಯಾಚಾರವೆಸಗಿದ ಘಟನೆ ಬೆಳಕಿಗೆ ಬಂದಿದೆ. 14 ವರ್ಷದ ಹುಡುಗ ನಾಲ್ಕು ವರ್ಷದ ಬಾಲಕಿ ಅತ್ಯಾಚಾರವೆಸಗಿದ್ದಾನೆ. ಹುಡುಗ ನಾಪತ್ತೆಯಾಗಿದ್ದು, ಆತನ ಪತ್ತೆ ಕಾರ್ಯ ನಡೆಯುತ್ತಿದೆ.
ಆರೋಪಿ, ಪೀಡಿತೆ ಮನೆಗೆ ಟಿವಿ ನೋಡಲು ಬರ್ತಿದ್ದ ಎನ್ನಲಾಗಿದೆ. ಘಟನೆ ನಡೆದ ದಿನ ಪೀಡಿತೆ ಮಾತ್ರ ಮನೆಯಲ್ಲಿದ್ದಳಂತೆ. ಅವಕಾಶ ಬಳಸಿಕೊಂಡ ಹುಡುಗ ಅತ್ಯಾಚಾರವೆಸಗಿದ್ದಾನೆ. ಘಟನೆ ನಂತ್ರ ಹುಡುಗ ನಾಪತ್ತೆಯಾಗಿದ್ದಾನೆ. ಮನೆಗೆ ಬಂದ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮಧ್ಯಪ್ರದೇಶದಲ್ಲಿ ಅಪ್ರಾಪ್ತೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣ ಹೆಚ್ಚಾಗ್ತಿದೆ. ಅಪ್ರಾಪ್ತೆಯರ ಮೇಲೆ ಅತ್ಯಾಚಾರವೆಸಗಿದ ಆರೋಪಿಗಳಿಗೆ ಗಲ್ಲುಶಿಕ್ಷೆ ವಿಧಿಸುವ ಕಾಯ್ದೆಗೆ ಕೆಲ ದಿನಗಳ ಹಿಂದಷ್ಟೇ ಮಂಜೂರಿ ಸಿಕ್ಕಿದೆ. ಕಳೆದ ವರ್ಷ ಮೇ ತಿಂಗಳಿನಲ್ಲಿ 23 ವರ್ಷದ ವ್ಯಕ್ತಿ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ. ವಿಚಾರಣೆ ನಡೆಸಿದ ಕೋರ್ಟ್ ಫೆಬ್ರವರಿಯಲ್ಲಿ ಗಲ್ಲುಶಿಕ್ಷೆ ವಿಧಿಸಿದೆ.