

ಬೆಂಗಳೂರು: ಮೈಸೂರು ರಸ್ತೆಯಲ್ಲಿ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸ್ಯಾಟ್‍ಲೈಟ್ ಬಸ್ ನಿಲ್ದಾಣದ ಬಳಿ ತೆರಳುತ್ತಿದ್ದ ಬೈಕ್ ಗೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಕೆಳಗೆ ಬಿದ್ದಿದ್ದು, ಲಾರಿ ಆತನ ಮೇಲೆಯೇ ಹರಿದಿದೆ. ಬೈಕ್ ಸವಾರನ ತಲೆ ಛಿದ್ರ ಛಿದ್ರವಾಗಿದ್ದು, ಆತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಮೃತ ಯುವಕನ ಗುರುತು ಪತ್ತೆಯಾಗಿಲ್ಲ.
ಇದೇ ರಸ್ತೆಯಲ್ಲಿ ಇನ್ನೊಂದು ದುರ್ಘಟನೆ ಸಂಭವಿಸಿದ್ದು, ವೇಗವಾಗಿ ಬಂದ ಇಂಡಿಕಾ ಕಾರೊಂದು ಚಾಲಕನ ಅಜಾಗರೂಕತೆಗೆಯಿಂದಾಗಿ ಪಲ್ಟಿಯಾಗಿದೆ. ಕಾರ್ ನಲ್ಲಿದ್ದ ಚಾಲಕ ಸೇರಿ ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬ್ಯಾಟರಾಯನಪುರ ಸಂಚಾರಿ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ.