

2011ರಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ವಿಚಾರಣೆ ಪೂರ್ಣಗೊಂಡಿದೆ. ಕೆಪಿಎಸ್ ಸಿ ನೇಮಕಾತಿಯಲ್ಲಿ ಕರ್ಮಕಾಂಡ ನಡೆದಿದೆ ಎಂದು ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಪೂರ್ಣಗೊಳಿಸಿದೆ.
362 ಕೆಪಿಎಸ್ ಸಿ ಹುದ್ದೆ ಆಯ್ಕೆ ವಿವಾದಕ್ಕೊಳಗಾಗಿತ್ತು. ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಕ್ತಾಯಗೊಳಿಸಿದ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ. ಭ್ರಷ್ಟಾಚಾರದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ 2011ನೇ ಸಾಲಿನ 362 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಯನ್ನು ರಾಜ್ಯ ಸರ್ಕಾರ ರದ್ದು ಪಡಿಸಿತ್ತು. ನಂತ್ರ ಅಷ್ಟೂ ಹುದ್ದೆಗಳ ನೇಮಕಾತಿಗೆ ಹಸಿರುನಿಶಾನೆ ತೋರಿತ್ತು. ಆ ಅಭ್ಯರ್ಥಿಗಳು ಕೆಲಸದಲ್ಲಿ ಮುಂದುವರೆಯಬೇಕಾ, ಬೇಡ್ವಾ ಎಂಬ ಬಗ್ಗೆ ಹೈಕೋರ್ಟ್ ತೀರ್ಪು ನೀಡಲಿದೆ.