

ಸುನಂದಾ ಹತ್ಯೆ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೊಳಗಾಗಿರುವ ಸರಣಿ ಹಂತಕ ಸೈನೈಡ್ ಮೋಹನ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಸೈನೈಡ್ ಮೋಹನ್ ಗೆ ಗಲ್ಲು ಶಿಕ್ಷೆಯನ್ನು ಖಾಯಂಗೊಳಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಮಹಿಳೆ ಸುನಂದಾ ಕೊಲೆ ಪ್ರಕರಣದ ಅಪರಾಧಿ ಸೈನೈಡ್ ಮೋಹನ್ ಗೆ ದಕ್ಷಿಣ ಕನ್ನಡ ಜಿಲ್ಲೆ 4ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಮೋಹನ್ ಹೈಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದ. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮೋಹನ್ ಗೆ ಗಲ್ಲನ್ನು ಖಾಯಂಗೊಳಿಸಿದೆ.
ಸುನಂದಾ ತಾಯಿ ಹಾಗೂ ಸಹೋದರನ ಹೇಳಿಕೆ ಪಡೆದು ಹೈಕೋರ್ಟ್ ನ್ಯಾಯಮೂರ್ತಿ ರವಿ ಮಳಿಮಠ್ ಹಾಗೂ ನ್ಯಾಯಮೂರ್ತಿ ಮೈಕಲ್ ಕುನ್ಹಾ ಪೀಠ ಗಲ್ಲು ಖಾಯಂಗೊಳಿಸಿದೆ. ಸರಣಿ ಹಂತಕ ಮೋಹನ್ ಗೆ ಇತರೆ ಮೂರು ಪ್ರಕರಣದಲ್ಲಿ ಗಲ್ಲು ಶಿಕ್ಷೆ ವಿಧಿಸಲಾಗಿದೆ. ನಾಲ್ಕು ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.