![rape_victim2]()
![rape_victim2]()
ಮುಜಫರ್ ನಗರ್: 32 ವರ್ಷದ ವಿವಾಹಿತೆ ಮಹಿಳೆ ಸಾಮೂಹಿಕ ಅತ್ಯಾಚಾರವೆಸಗಿದ ಇಬ್ಬರು ಕಾಮುಕರು ಈ ದೃಶ್ಯಗಳನ್ನು ಚಿತ್ರೀಕರಿಸಿಕೊಂಡು ಮಹಿಳೆಗೆ ನಿರಂತರವಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮುಜಫರ್ ನಗರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಎರಡು ವರ್ಷಗಳ ಹಿಂದೆ ಕೈಲ್ವಾಡಾ ಎಂಬ ಗ್ರಾಮದ ಮಹಿಳೆ ಮೇಲೆ ಇರ್ಷಾದ್ ಮತ್ತು ನಜೀರ್ ಎಂಬ ಇಬ್ಬರು ಕಾಮುಕರು ಅತ್ಯಾಚಾರವೆಸಗಿದ್ದರು. ಈ ದೃಶ್ಯಗಳನ್ನು ಚಿತ್ರೀಕರಿಸಿಕೊಂಡಿದ್ದ ಅವರುಗಳು ಮಹಿಳೆಗೆ ಸಾಮಾಜಿಕ ಜಾಲ ತಾಣದಲ್ಲಿ ಬಹಿರಂಗಗೊಳಿಸುವುದಾಗಿ ಬೆದರಿಕೆ ಒಡ್ಡುತ್ತಾ ನಿರಂತರವಾಗಿ ಅತ್ಯಾಚಾರವೆಸಗಿದ್ದರು.
ಇವರುಗಳ ನಿರಂತರ ಕಿರುಕುಳದಿಂದ ರೋಸತ್ತ ಮಹಿಳೆ ಇದೀಗ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳಿಬ್ಬರು ಈಗ ಪರಾರಿಯಾಗಿದ್ದಾರೆ. ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿ ಹೇಳಿಕೆ ಪಡೆದುಕೊಳ್ಳಲಾಗಿದ್ದು, ಪರಾರಿಯಾಗಿರುವ ಆರೋಪಿಗಳ ಪತ್ತೆ ಕಾರ್ಯದಲ್ಲಿ ಪೊಲೀಸರು ತೊಡಗಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಮುಜಫರ್ ನಗರ್ ಜಿಲ್ಲೆಯ ಮತ್ತೊಬ್ಬ ಮಹಿಳೆ ಮೇಲೆ ಅತ್ಯಾಚಾರವೆಸಗಿ ಈ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ಅಪ್ ಲೋಡ್ ಮಾಡಿದ್ದ ಕಾರಣ ಆಕೆ ಆತ್ಮಹತ್ಯೆಗೆ ಶರಣಾಗಿದ್ದಳು.