
ಬಾಲಿವುಡ್ ಸ್ಟಾರ್ ಗಳಿಗೆ ಅದೇನಾಗಿದೆಯೋ ಗೊತ್ತಿಲ್ಲ. ದಿನಕ್ಕೊಂದರಂತೆ ಸಿನಿಮಾ ಮಂದಿಯ ಪ್ರಕರಣ ಸುದ್ದಿಯಾಗುತ್ತಲೇ ಇರುತ್ತವೆ. ಇದೀಗ ಬಾಲಿವುಡ್ ಖ್ಯಾತ ನಟರೊಬ್ಬರ ವಿರುದ್ಧ ಯುವತಿ ಮುಂಬೈ ಪೊಲೀಸರಿಗೆ ದೂರು ನೀಡಿದ್ದಾರೆ.
ಮುಂಬೈನಲ್ಲಿ ನಟ ನವಾಜುದ್ದೀನ್ ಸಿದ್ದಿಕಿ ಅವರು ಯುವತಿಯೊಬ್ಬಳ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ದೂರು ದಾಖಲಾಗಿದೆ. ಪಾರ್ಕಿಂಗ್ ಲಾಟ್ ವೊಂದರಲ್ಲಿ ವಾಹನ ನಿಲ್ಲಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನವಾಜುದ್ದೀನ್ ಸಿದ್ದಿಕಿ ಹಾಗೂ ಯುವತಿಯ ನಡುವೆ ಜೋರಾಗಿಯೇ ಜಗಳವಾಗಿದೆ. ಈ ಸಂದರ್ಭದಲ್ಲಿಯೇ ನವಾಜುದ್ದೀನ್ ಸಿದ್ದಿಕಿ ಯುವತಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಯುವತಿ ಮುಂಬೈನ ವರ್ಸೋವಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ನವಾಜುದ್ದೀನ್ ಸಿದ್ದಿಕಿ ಅವರು ಸಲ್ಮಾನ್ ಖಾನ್ ಅಭಿನಯದ ಬಾಲಿವುಡ್ ಸಿನಿಮಾ 'ಭಜರಂಗಿ ಭಾಯಿಜಾನ್' ಸಿನಿಮಾದಲ್ಲಿ ಪಾಕಿಸ್ತಾನಿ ಪತ್ರಕರ್ತನಾಗಿ ಮನೋಜ್ಞ ಅಭಿನಯ ನೀಡಿದ್ದರು. ನಂತರದಲ್ಲಿ ಅವರು ಸಾಲು, ಸಾಲು ಸಿನಿಮಾಗಳಲ್ಲಿ ನಟಿಸುವ ಅವಕಾಶ ಪಡೆದುಕೊಂಡರು. ಇದೀಗ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.