Quantcast
Channel: Kannada Dunia | Kannada News | Karnataka News | India News
Viewing all articles
Browse latest Browse all 122063

ಆರ್ ಎಸ್ ಎಸ್ ಕಚೇರಿ ಮೇಲೆ ಗುಂಡಿನ ದಾಳಿ

$
0
0

rss-shaka-attack_650x400_51453103835

rss-shaka-attack_650x400_51453103835 ಪಂಜಾಬ್ ನ ಲೂಧಿಯಾನದಲ್ಲಿ ಆರ್ ಎಸ್ ಎಸ್ ಕಚೇರಿ ಮೇಲೆ ಇಬ್ಬರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಘಟನೆ ನಡೆದಿದ್ದು, ಘಟನೆಯಲ್ಲಿ ಒಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಲೂಧಿಯಾನದ ಕಿಡವಾಯಿ ನಗರದಲ್ಲಿರುವ ಆರ್ ಎಸ್ ಎಸ್ ಕಚೇರಿಯ ಸಮೀಪ ಈ ಘಟನೆ ನಡೆದಿದ್ದು, ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕಚೇರಿಯ ಮುಂಭಾಗದಲ್ಲಿದ್ದವರ ಮೇಲೆ ಏಕಾಏಕಿ ಗುಂಡು ಹಾರಿಸಿದ್ದು, ಈ ದಾಳಿಯಿಂದಾಗಿ ಒಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ. ಈಗಾಗಲೇ ಗಾಯಾಳುವನ್ನು ಲೂಧಿಯಾನದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೇ ಆರೋಪಿಗಳ ಪತ್ತೆ ಕಾರ್ಯ ಆರಂಭಿಸಿದ್ದು, ಈ ದಾಳಿ ನಡೆಸಿರುವುದರ ಉದ್ದೇಶವೇನು ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ.

Viewing all articles
Browse latest Browse all 122063


<script src="https://jsc.adskeeper.com/r/s/rssing.com.1596347.js" async> </script>