![PERU BUS CRASH]()
![PERU BUS CRASH]()
ಪೆರುವಿನ ಪಿಚನಕಿ ನಗರಕ್ಕೆ ತೆರಳುತ್ತಿದ್ದ ಬಸ್ ವೊಂದು ತರ್ಮಾ ನದಿಗೆ ಉರುಳಿದ್ದು ಘಟನೆಯಲ್ಲಿ 16 ಮಂದಿ ಸಾವನ್ನಪ್ಪಿ 10 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪರ್ವತ ಶ್ರೇಣಿಯಿಂದ ಕೂಡಿರುವ ಈ ಪ್ರದೇಶದಲ್ಲಿ ಕಿರಿದಾದ ರಸ್ತೆಗಳಿದ್ದು ಅಪಘಾತಗಳು ಹೆಚ್ಚುತ್ತಿದ್ದು ಆಂಡಿಸ್ ಪರ್ವತ ಶ್ರೇಣಿಯ ಕಡಿದಾದ ತಿರುವಿನಲ್ಲಿ ಬಸ್ ಚಾಲಕ ನಿಯಂತ್ರಣ ಕಳೆದುಕೊಂಡಿದ್ದರಿಂದ ಬಸ್ ನದಿಗೆ ಉರುಳಿತು ಎನ್ನಲಾಗಿದೆ.
ಘಟನೆಯಲ್ಲಿ 16 ಮಂದಿ ಸಾವನ್ನಪ್ಪಿ 10 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದ್ದು, ಈಗಾಗಲೇ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ ಎಂಬ ಮಾಹಿತಿ ಲಭಿಸಿದೆ.